ಮಧ್ಯ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್ ಗೆ ವಿಮಾನ

ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನಯಾನ ಸಂಸ್ಥೆಯು ಸೇವೆ ಆರಂಭಿಸಲು ಮುಂದಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಯು ಚೆನ್ನೈ ಮತ್ತು ಹೈದರಾಬಾದ್ ನಗರಗಳಿಗೆ ನೇರ ವಿಮಾನ ಸಂಪರ್ಕ ಕಲ್ಪಿಸುತ್ತಿದೆ. ಅಕ್ಟೋಬರ್ 10 ರಿಂದ ಹೊಸ ವಿಮಾನ ಸಂಚಾರ ಆರಂಭವಾಗಲಿದೆ.

ಸ್ಪೈಸ್ ಜೆಟ್ ಸಂಸ್ಥೆ ಈ ಎರಡು ಮಾರ್ಗದಲ್ಲಿ ನೇರ ವಿಮಾನ ಸಂಪರ್ಕ ಕಲ್ಪಿಸಲಿದ್ದು, ಈಗಾಗಲೇ ಟಿಕೆಟ್ ಬುಕಿಂಗ್ ಆರಂಭಿಸಲಾಗಿದೆ. ಶಿವಮೊಗ್ಗ- ಚೆನ್ನೈ ನಡುವೆ ಪ್ರಯಾಣದರ 4123 ರೂ.ನಿಂದ ಆರಂಭವಾಗಲಿದೆ. ಶಿವಮೊಗ್ಗ- ಹೈದರಾಬಾದ್ ನಡುವೆ ಪ್ರಯಾಣದರ 2299 ರೂಪಾಯಿ ಇದೆ.

ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 10:40ಕ್ಕೆ ಚೆನ್ನೈನಿಂದ ಹೊರಟು ಮಧ್ಯಾಹ್ನ 12:10ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ. 12:35 ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 2:05ಕ್ಕೆ ಹೈದರಾಬಾದ್ ತಲುಪಲಿದೆ. ಮಧ್ಯಾಹ್ನ 2:40ಕ್ಕೆ ಹೈದರಾಬಾದ್ ನಿಂದ ಹೊರಟು ಸಂಜೆ 4 ಗಂಟೆಗೆ ಶಿವಮೊಗ್ಗ ತಲುಪಲಿದೆ. ಸಂಜೆ 4:25ಕ್ಕೆ ಶಿವಮೊಗ್ಗದಿಂದ ಹೊರಟು 7:55ಕ್ಕೆ ಚೆನ್ನೈ ತಲುಪಲಿದೆ.

ಈಗಾಗಲೇ ಶಿವಮೊಗ್ಗ- ಬೆಂಗಳೂರು ನಡುವೆ ಇಂಡಿಗೋ ವಿಮಾನ ಸಂಚರಿಸುತ್ತಿದೆ. ಹೈದರಾಬಾದ್, ತಿರುಪತಿ ಮತ್ತು ಗೋವಾ ನಡುವೆ ಸ್ಟಾರ್ ಏರ್ ವಿಮಾನಗಳು ಸಂಚರಿಸುತ್ತಿವೆ. ಇದೀಗ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಕೂಡ ಸೇವೆ ಒದಗಿಸಲಿದೆ. ಮುಂದಿನ ದಿನಗಳಲ್ಲಿ ದೆಹಲಿ, ಮುಂಬೈಗೆ ನೇರ ವಿಮಾನಯಾನ ಸೌಲಭ್ಯ ಕಲ್ಪಿಸುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read