HomeKarnatakaBREAKING NEWS: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ

BREAKING NEWS: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ. ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಎರಡು ಗುಂಪುಗಳಿಂದ ನಡೆದ ಪರಸ್ಪರ ಕಲ್ಲು ತೂರಾಟದಿಂದ ಮನೆಗಳು, ವಾಹನಗಳ ಗಾಜು ಪುಡಿಪುಡಿಯಾಗಿವೆ. ಪೊಲೀಸರು, ರ್ಯಾಪಿಡ್ ಆಕ್ಷನ್ ಫೋರ್ಸ್ ತಕ್ಷಣ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದೆ. ಸ್ಥಳಕ್ಕೆ ಎಸ್.ಪಿ. ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಗಿ ಭದ್ರತೆಯಲ್ಲಿ ಈದ್ ಮೆರವಣಿಗೆ ನಡೆದಿದ್ದು, ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಲಾಗಿದೆ. ಎರಡೂ ಗುಂಪಿನವರಿಂದ ನಡೆದ ಕಲ್ಲು ತೂರಾಟದಲ್ಲಿ ಮನೆಗಳು, ವಾಹನಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular