HomeKarnatakaಕಾಲೇಜು ವಿದ್ಯಾರ್ಥಿನಿಯಿಂದ ದುಡುಕಿನ ನಿರ್ಧಾರ; ಏಕಾಏಕಿ ಆತ್ಮಹತ್ಯೆಗೆ ಶರಣು

ಕಾಲೇಜು ವಿದ್ಯಾರ್ಥಿನಿಯಿಂದ ದುಡುಕಿನ ನಿರ್ಧಾರ; ಏಕಾಏಕಿ ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಕಾಲೇಜು ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಾಳೆಬೈಲಿನಲ್ಲಿ ನಡೆದಿದೆ.

20 ವರ್ಷದ ಅಧೀಕ್ಷಾ ಸಾವಿಗೆ ಶರಣಾದ ವಿದ್ಯಾರ್ಥಿನಿ. ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು. ಅಧೀಕ್ಷಾ ಇಂದು ಮನೆಯ ತನ್ನ ಕೋಣೆಯಿಂದ ಎಷ್ಟು ಹೊತ್ತದರೂ ಹೊರಗೆ ಬಂದಿಲ್ಲ. ಕುಟುಂಬ ಸದಸ್ಯರು ರೂಮಿನ ಬಾಗಿಲು ತೆರೆದುನೋಡಿದಾಗ ನೇಣಿಗೆ ಕೊರಳೊಡ್ಡಿರುವುದು ತಿಳಿದುಬಂದಿದೆ.

ತಂದೆ-ತಾಯಿ ಮನೆಯಲ್ಲಿ ಇರಲಿಲ್ಲ. ಈ ವೇಳೆ ಅಧೀಕ್ಷಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular