ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜುಳಾ (21) ಹಾಗೂ ಸುಜೈನ್ ಖಾನ್ (24) ಎಂದು ಗುರುತಿಸಲಾಗಿದೆ. ಭದ್ರಾವತಿಯ ಪೇಪರ್ ಟೌನ್ 5ನೇ ವಾರ್ಡ್ ನ ಚಂದ್ರಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು. ಮನೆಯ ಬೀರುವಿನಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದರು.
ಭದ್ರಾವತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬೆಂಗಳೂರು ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.