HomeKarnatakaಹಬ್ಬಕ್ಕೆ ಊರಿಗೆ ಹೋಗಿ ಬಂದವರಿಗೆ ಬಿಗ್ ಶಾಕ್: ಐದು ಮನೆಯಲ್ಲಿ ಸರಣಿ ಕಳವು

ಹಬ್ಬಕ್ಕೆ ಊರಿಗೆ ಹೋಗಿ ಬಂದವರಿಗೆ ಬಿಗ್ ಶಾಕ್: ಐದು ಮನೆಯಲ್ಲಿ ಸರಣಿ ಕಳವು

ಶಿವಮೊಗ್ಗ: ಶಿವಮೊಗ್ಗದ ಬಸವನಗುಡಿಯ ಪಿಡಬ್ಲ್ಯೂಡಿ ಕ್ವಾಟ್ರಸ್‌ನಲ್ಲಿ ಸರಣಿ ಕಳ್ಳತನ ನಡೆಸಲಾಗಿದೆ. ಐದು ಮನೆಗಳಲ್ಲಿ ಕಳವು ಮಾಡಿದ್ದು, ಮತ್ತೆರಡು ಮನೆಗಳಲ್ಲಿ ಕಳ್ಳತನಕ್ಕೆ ಯತ್ನ ನಡೆದಿದೆ.

ಪೊಲೀಸ್ ಅಧಿಕಾರಿ ದೀಪಕ್, ನ್ಯಾಯಾಧೀಶರ ಕಾರ್ ಚಾಲಕ ಪ್ರಕಾಶ್, ವಾರ್ತಾ ಇಲಾಖೆ ಅಧಿಕಾರಿ ಭಾಗ್ಯ, ಡಿಸಿ ಕಚೇರಿಯ ಎಸ್‌ಡಿಎ ಸಂಧ್ಯಾ, ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯ ಸ್ಟೆನೋ ನಂದಿನಿ ಅವರ ಮನೆಗಳಲ್ಲಿ ಕಳವು ಮಾಡಲಾಗಿದೆ. ಬೆಳಗಿನ ಜಾವ ಎರಡು ಲಕ್ಷಕ್ಕೂ ಹೆಚ್ಚು ನಗದು, 300 ಗ್ರಾಂ ಚಿನ್ನ ಕಳವು ಮಾಡಲಾಗಿದೆ.

ಮನೆಯವರು ಗಣೇಶ ಹಬ್ಬ ಮತ್ತು ಕೆಲಸದ ಮೇಲೆ ಊರಿಗೆ ಹೋಗಿದ್ದಾಗ ಸರಣಿ ಕಳ್ಳತನ ನಡೆಸಲಾಗಿದೆ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular