BIG NEWS: ಮಲೆನಾಡಿನಲ್ಲಿ ಹೆಚ್ಚುತ್ತಿದೆ ಮಂಗನ ಕಾಯಿಲೆ; ತೀರ್ಥಹಳ್ಳಿಯಲ್ಲಿ ಒಂದೇ ದಿನದಲ್ಲಿ 6 ಜನರಲ್ಲಿ ಸೋಂಕು ಪತ್ತೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಒಂದೇ ದಿನದಲ್ಲಿ 6 ಜನರಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆಯಾಗಿದೆ.

ಸೋಂಕಿತರನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿಗಳ ಸಂಪರ್ಕಕ್ಕೆ ಬಂದ 42 ಜನರ ರಕ್ತ ತಪಾಸಣೆ ಮಾಡಲಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿ ರಾಜೇಶ್ ಸುರಗಿಹಳ್ಳಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತಂಕಪಡುವ ಅಗತ್ಯವಿಲ್ಲ, ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಶಿವಮೊಗದಲ್ಲಿ ಈವರೆಗೆ ಒಟ್ಟು 32 ಜನರಲ್ಲಿ ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿದೆ. ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಮಂಗನ ಕಾಯಿಲೆಗಳು ಹೆಚ್ಚುತ್ತಿವೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read