HomeLatest Newsರೈಲ್ವೆ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನ: ಲೋಕೋಪೈಲಟ್ ಸಮಯಪ್ರಜ್ಞೆಯಿಂದ ಬಚಾವಾದ ವ್ಯಕ್ತಿ

ರೈಲ್ವೆ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನ: ಲೋಕೋಪೈಲಟ್ ಸಮಯಪ್ರಜ್ಞೆಯಿಂದ ಬಚಾವಾದ ವ್ಯಕ್ತಿ

ಶಿವಮೊಗ್ಗ: ವ್ಯಕ್ತಿಯೊಬ್ಬ ರೈಲು ಬರುತ್ತಿದ್ದಂತೆ ರೈಲ್ವೆ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದನ್ನು ಗಮನಿಸಿದ ಲೋಕೋಪೈಲಟ್ ರೈಲು ನಿಲ್ಲಿಸಿ ವ್ಯಕ್ತಿಯನ್ನು ರಕ್ಷಿಸಿದ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚಂದ್ರಮಾವಿನಕೊಪ್ಪಲು ಎಂಬಲ್ಲಿ ಈ ಘಟನೆ ನಡೆದಿದೆ. ತಾಳಗುಪ್ಪದಿಂದ ಮೈಸೂರಿನತ್ತ ಸಾಗುತ್ತಿದ್ದ ರೈಲು ಬರುತ್ತಿದ್ದಂತೆ ವ್ಯಕ್ತಿ ರೈಲ್ವೆ ಹಳಿಗೆ ಹಾರಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಕ್ಷಣ ಲೋಕೋಪೈಲಟ್ ರೈಲನ್ನು ನಿಲ್ಲಿಸಿದ್ದಾರೆ. ರೈಲಿನಿಂದ ಕೆಳಗಿಳಿದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ರೈಲಿನಡಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸಿ ಆಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಲೋಕೋಪೈಲಟ್ ಸಮಯಪ್ರಜ್ಞೆಯಿಂದ ವ್ಯಕ್ತಿಯ ಜೀವ ಉಳಿದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular