HomeKarnatakaಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ತಾಯಿ; ಮಹಿಳೆ, ಓರ್ವ ಮಗುವಿನ ರಕ್ಷಣೆ; ಇಬ್ಬರು ಮಕ್ಕಳು...

ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ತಾಯಿ; ಮಹಿಳೆ, ಓರ್ವ ಮಗುವಿನ ರಕ್ಷಣೆ; ಇಬ್ಬರು ಮಕ್ಕಳು ನೀರುಪಾಲು

ಶಿವಮೊಗ್ಗ: ಕೌಟಂಬಿಕ ಕಲಹಕ್ಕೆ ಬೇಸತ್ತು ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಘಟನೆ ಶಿವಮೊಗ್ಗ ಜಿಲ್ಲೆಯ ಅರಕೆರೆ ದೇವಾಲಯದ ಬಳಿ ನಡೆದಿದೆ.

ಅರಕೆರೆಯ ದೇವಾಲಯ ಪಕ್ಕದ ರೈಲ್ವೆ ಸೇತುವೆ ಬಳಿ ತಾಯಿ ತನ್ನ ಮೂವರು ಮಕ್ಕಳೂಂದಿಗೆ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ನವೀನ್ ಹಾಗೂ ದಾದಪೀರ್ ಎಂಬ ಯುವಕರು ತಕ್ಶಹ್ಣ ನದಿಗೆ ಹಾರಿ ತಾಯಿ ಹಾಗೂ 11 ತಿಂಗಳ ಗಂಡು ಮಗುವನ್ನು ರಕ್ಷಿಸಿದ್ದಾರೆ‌. ಆದರೆ, 6 ಮತ್ತು 4 ವರ್ಷದ ಇಬ್ಬರು ಹೆಣ್ಣು ಮಕ್ಕಳು ನದಿ ನೀರು ಪಾಲಾಗಿದ್ದು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಕೋಟೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಆಗಮಿಸಿ ಶೋಧ ನಡೆಸಲು ಮುಂದಾದರು. ಆದರೆ ನದಿಯಲ್ಲಿ‌ ನೀರಿನ ಹರಿವು ಹೆಚ್ಚಾದ ಕಾರಣದಿಂದ ಶೋಧ ಕಾರ್ಯ ನಡೆಸಲು ಆಗದೇ ವಾಪಸ್ ಅಗಿದ್ದಾರೆ.

ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮೂಲದ ಭವಾನಿ ಎಂಬ ಮಹಿಳೆ ತನ್ನ ಮೂರು ಮಕ್ಕಳೊಂದಿಗೆ ನದಿಗೆ ಹಾರಿದ್ದು, ತಾಯಿ ಹಾಗೂ ಒಂದು ಮಗುವನ್ನು ರಕ್ಷಿಸಲಾಗಿದೆ. ರಕ್ಷಣೆಗೆ ಒಳಗಾದ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಹಾಲಿ ದಾವಣಗೆರೆ ಜಿಲ್ಲೆಯ ಸವಳಂಗದಲ್ಲಿ ನೆಲೆಸಿದ್ದರು ಎಂಬುವುದು ಪ್ರಾಥಮಿಕ‌ ತನಿಖೆಯಲ್ಲಿ ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular