HomeKarnatakaBIG NEWS: ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

BIG NEWS: ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಶಿವಮೊಗ್ಗ: ಕಾಡಾನೆ ದಾಳಿಗೆ ಕೃಷಿ ಕಾರ್ಮಿಕನೊಬ್ಬ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರದಲ್ಲಿ ನಡೆದಿದೆ.

ತಿಮ್ಮಪ್ಪ (58) ಮೃತ ದುರ್ದೈವಿ. ಮುಂಜಾನೆ ಕಾಡಿಗೆ ಹುಲ್ಲು ತರಲೆಂದು ಹೋಗಿದ್ದಾಗ ಕಾಡಾನೆ ದಾಳಿ ನಡೆಸಿದೆ. ತಿಮ್ಮಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular