ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಮಹಿಳೆ ನಿಧನ

ಶಿವಮೊಗ್ಗ: ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಭದ್ರಾವತಿಯ ಮಹಿಳೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೀನಾಕ್ಷಿ(52) ಮೃತಪಟ್ಟ ಮಹಿಳೆ. ಅವರು ಪತಿ ಗುತ್ತಿಗೆದಾರ ಸುಬ್ರಮಣಿ ಮತ್ತು ಮೂವರು ಪುತ್ರರು ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮೀನಾಕ್ಷಿ ನಿಧನರಾಗಿದ್ದಾರೆ ಎಂದು ವೈದ್ಯರು ಹೇಳಿದ್ದರಿಂದ ಮಂಗಳವಾರ ಬೆಳಗ್ಗೆ ಮೃತ ದೇಹವನ್ನು ಮನೆಗೆ ತಂದು ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಂಧು ಬಾಂಧವರು ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ. ಈ ವೇಳೆ ಕಣ್ಣು ಬಿಟ್ಟು ನೋಡಿ ಉಸಿರಾಡಿದ ಮೀನಾಕ್ಷಿ ಅವರನ್ನು ಕೂಡಲೇ ಕುಟುಂಬದವರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೀನಾಕ್ಷಿ ಮೃತಪಟ್ಟಿದ್ದಾರೆ. ಶುಕ್ರವಾರ ಭದ್ರಾವತಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read