ಶಿವಮೊಗ್ಗ: ಕ್ರಿಕೆಟ್ ಆಡುವ ವಿಚಾರವಾಗಿ ಗಲಾಟೆ ಆರಂಭವಾಗಿ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಬಡಾವಣೆಯಲ್ಲಿ ನಡೆದಿದೆ.
ಅರುಣ್ (23) ಮೃತ ಯುವಕ. ಕೇಶವಪುರ ಬಡಾವಣೆ ನಿವಾಸಿ. ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆಯಲ್ಲಿ ಸಂಜಯ್ (20) ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ.
ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.