HomeKarnatakaBIG NEWS: ಸ್ಟೇಟಸ್ ಹಾಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ

BIG NEWS: ಸ್ಟೇಟಸ್ ಹಾಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ

ಶಿವಮೊಗ್ಗ: ವಾಟ್ಸಪ್ ಸ್ಟೇಟಸ್ ಹಾಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇಂದಾವರ ಗ್ರಾಮದಲ್ಲಿ ನಡೆದಿದೆ.

ಜಯದೀಪ್ (24) ಮೃತ ಯುವಕ. ರ್ಯಾಂಕ್ ಸ್ಟುಡೆಂಟ್ ಆಗಿದ್ದ ಜಯದೀಪ್ ಜೀವನದಲ್ಲಿ ಜಿಗುಪ್ಸೆಗೊಂಡು ತುಂಗಾನದಿಗೆ ಹಾರಿದ್ದಾನೆ. ಸಾವಿಗೂ ಮುನ್ನ ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿದ್ದ.

ತುಂಗಾನದಿಯ ಬಳಿ ಬೈಕ್ ನಿಲ್ಲಿಸಿ ಶನಿವಾರದಿಂದ ನಾಪತ್ತೆಯಾಗಿದ್ದ. ತುಂಗಾನದಿ ಬಳಿ ಬೈಕ್ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ನದಿಯಲ್ಲಿ ಯುವಕನಿಗಾಗಿ ಹುಡುಕಾಡಿದ್ದರು. ಇದೀಗ ತುಂಗಾನದಿ ಸ್ಮಶಾನಕಟ್ಟೆ ಬಳಿ ಯುವಕನ ಶವ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಯದೀಪ್, ಆನ್ ಲೈನ್ ಟ್ರೇಡಿಂಗ್ ನಲ್ಲಿ ಕೂಡ ಸಿಲುಕಿಕೊಂಡಿದ್ದ ಎನ್ನಲಾಗಿದೆ. ತಾಳ್ಮೆ ಕಳೆದುಕೊಂಡು ಯುವಕ ದುಡುಕಿನ ನಿರ್ಧಾರ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular