HomeKarnatakaBIG NEWS: ಗ್ಯಾರಂಟಿ ಯೋಜನೆ ಜಾಹೀರಾತಿನಲ್ಲೇ ಸಚಿವರು ಕಾಲ ಕಳೆಯುತ್ತಿದ್ದಾರೆ; ಇದೊಂದು ಅಸಮರ್ಥ ಸರ್ಕಾರ; ಬಿ.ವೈ.ರಾಘವೇಂದ್ರ...

BIG NEWS: ಗ್ಯಾರಂಟಿ ಯೋಜನೆ ಜಾಹೀರಾತಿನಲ್ಲೇ ಸಚಿವರು ಕಾಲ ಕಳೆಯುತ್ತಿದ್ದಾರೆ; ಇದೊಂದು ಅಸಮರ್ಥ ಸರ್ಕಾರ; ಬಿ.ವೈ.ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗ: ರಾಜ್ಯದಲ್ಲಿ ಇರುವುದು ಅಸಮರ್ಥ ಸರ್ಕಾರ ಎಂದು ಸಂಸದ ಬಿ.ವೈ.ರಾಘವೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ರಾಜ್ಯದಲ್ಲಿ ಬರದಿಂದ ರೈತರು ತತ್ತರಿಸಿದರೂ ಯಾವ ಸಚಿವರು ಜಿಲ್ಲೆಗಳಿಗೆ ಭೇಟಿ ನೀಡಿಲ್ಲ. ಬರಿ ಗ್ಯಾರಂಟಿ ಯೋಜನೆಗಳ ಜಾಹೀರಾತಿನಲ್ಲಿಯೇ ಕಾಲ ಕಳೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ ಜಿಲ್ಲೆಯಲ್ಲಿ 41,630 ಹೆಕ್ಟೇರ್ ಭತ್ತ ಒನಗಿ ಹೋಗಿದೆ. ಬರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ 192 ಕೋಟಿ ನಷ್ಟ ಉಂಟಾಗಿದೆ. ರಾಜ್ಯ ಸರ್ಕಾರ ಬರ ಪರಿಹಾರ ಮೊತ್ತವನ್ನೂ ಕಡಿತಗೊಳಿಸಿದೆ. ಹೀಗಾದರೆ ಜಿಲ್ಲೆಯ ರೈತರ ಗತಿಯೇನು? ಎಂದು ಪ್ರಶ್ನಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular