HomeKarnatakaBREAKING: ಬಸ್ ನಿಲ್ದಾಣದ ಶೌಚಾಲಯದಲ್ಲಿಯೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

BREAKING: ಬಸ್ ನಿಲ್ದಾಣದ ಶೌಚಾಲಯದಲ್ಲಿಯೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಶಿವಮೊಗ್ಗ: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಬಸ್ ನಿಲ್ದಾಣದ ಶೌಚಾಲಯದಲ್ಲಿ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊನ್ನಿಗಾನಹಳ್ಳಿ ನಿವಾಸಿ ಹೆಚ್.ಎಂ.ಮರಿಸ್ವಾಮಿ ಆತ್ಮಹತ್ಯೆ ಮಾಡಿಕೊಂಡವರು. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊನ್ನಿಗಾನಹಳ್ಳಿ ನಿವಾಸಿ ಆಗಿರುವ ಮರಿಸ್ವಾಮಿ ಶಿವಮೊಗ್ಗದ ಬಸ್ ನಿಲ್ದಾಣದಲ್ಲಿ ಸಾವಿಗೆ ಶರಣಾಗಿದ್ದಾರೆ.

ಬೆಳಿಗ್ಗೆ ಶೌಚಾಲಯ ಸಿಬ್ಬಂದಿ ಕ್ಲೀನಿಂಗ್ ಗೆ ಹೋಗಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಶೌಚಾಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular