ಶಿವಮೊಗ್ಗದಲ್ಲಿ ಎರಡು ಗುಂಪುಗಳ ಮಾತಿನ ಚಕಮಕಿ; ಗೊಂದಲ ನಿವಾರಿಸಿದ ಪೊಲೀಸರು

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ.

ಗಣಪತಿ ವಿಸರ್ಜನೆ ವೇಳೆ ಶಿವಮೊಗ್ಗದ ಅಹ್ಮದ್ ವೃತ್ತ ಹಾಗೂ ಶಿವಪ್ಪ ನಾಯಕ ಪ್ರತಿಮೆ ಬಳಿ ಕಟ್ಟಲಾಗಿದ್ದ ಬಾವುಟಗಳನ್ನು ತೆಗೆದ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮೊದಲೇ ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಧ್ಯಪ್ರವೇಶ ಮಾಡಿ ಗೊಂದಲ ನಿವಾರಿಸಿದ್ದಾರೆ.

ಸಧ್ಯ ಶಿವಮೊಗ್ಗದಲ್ಲಿ ಪರಿಸ್ಥಿತಿ ಶಾಂತಿಯುತವಾಗಿದ್ದು, ಎಲ್ಲರೂ ಹಬ್ಬವನ್ನು ಸಂತೋಷದಿಂದ ಆಚರಿಸಬೇಕು. ಯಾವುದೇ ಗೊಂದಲಗಳಿದ್ದರೂ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಇನ್ನೂ ಎರಡು ಮೂರು ದಿನ ಹಬ್ಬ ಇದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲೆಡೆ ನಿಗಾ ವಹಿಸಲಾಗುತ್ತಿದೆ ಎಂದು ಎಸ್ ಪಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read