ಶಿವಮೊಗ್ಗ: ಶಿವಮೊಗ್ಗದಲ್ಲಿ ಮತ್ತೆ ಮಂಗನ ಕಾಯಿಲೆ ಹೆಚ್ಚುತ್ತಿದ್ದು, ಆರು ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಆತಂಕ ಸೃಷ್ಟಿಸ್ದೆ.
ಶಿವಮೊಗ್ಗದ ಹೊಸನಗರ ತಾಲೂಕಿನ ಬಿಳ್ಕೋಡಿ ಗ್ರಾಮದ ಆರು ಜನರಲ್ಲಿ ಮಂಗನ ಕಾಯಿಲೆ ಅಥವಾ ಕೆ.ಎಫ್.ಡಿ ಪತ್ತೆಯಾಗಿದೆ. ಕಳೆದ ವಾರ 55 ವರ್ಷದ ಮಹಿಳೆಯೊಬ್ಬರಲ್ಲಿ ಕೆ.ಎಫ್. ಡಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅದೇ ಗ್ರಾಮದ ಹಲವರನ್ನು ಪರೀಕ್ಷೆಗೆ ಒಳಪಡಿಸಿದ್ದರು. ಇದೀಗ ಐವರಲ್ಲಿ ಸೋಂಕು ದೃಢಪಟ್ಟಿದೆ.
ಸಾಮಾನ್ಯವಾಗಿ ಜನವರಿಯಲ್ಲಿ ಕೆ.ಎಫ್.ಡಿ ಪಾಸಿಟಿವ್ ಪ್ರಕರಣ ಹೆಚ್ಚು ಪತ್ತೆಯಾಗುತ್ತಿದ್ದವು. ಆದರೆ ಈ ವರ್ಷ ನವೆಂಬರ್ ನಿಂದಲೇ ಪ್ರಕರಣಗಳು ಕಂಡುಬರುತ್ತಿದೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ಗ್ರಾಮದಲ್ಲಿ ಓರ್ವ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ.

