ಶಿವಮೊಗ್ಗ: ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಕತ್ತು ಹಿಸಿಕಿ ಕೊಲೆಗೈದು ಪರಾರಿಯಾಗಿದ್ದ ಪತಿ ಮಹಾಶಯನನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ.
ಗೋಪಿ ಬಂಧಿತ ಆರೋಪಿ. ಜ.11ರಂದು ಪತ್ನಿ ಚಂದನಬಾಯಿಯನ್ನು ಪತಿ ಗೋಪಿ ಕತ್ತು ಹಿಸುಕಿ ಕೊಲೆಗೈದು ಎಸ್ಕೇಪ್ ಆಗಿದ್ದ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಚಂದನಬಾಯಿ ಹಾಗೂ ಗೋಪಿ ಪರಸ್ಪರ ಪ್ರೀತಿಸಿ ಓಡಿಹೋಗಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು. ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಗೋಪಿ, ಮತ್ತೋರ್ವ ಯುವತಿಯ ಹಿಂದೆ ಬಿದ್ದಿದ್ದಾನೆ. ಸಾಲದ್ದಕ್ಕೆ ಆಕೆಯನ್ನು ವಿವಾಹವಾಗಲು ಸಿದ್ಧತೆ ನಡೆಸಿದ್ದ. ಈ ವಿಚಾರ ಗೊತ್ತಾಗುತ್ತಿದ್ದಂತೆ ಪತ್ನಿ ಚಂದನಬಾಯಿ ವಿರೋಧ ವ್ಯಕ್ತಪಡಿಸಿದ್ದಳು. ಪತ್ನಿ ಜೊತೆ ಗಲಾಟೆ, ಜಗಳ ಆರಂಭವಾಗಿ ಈ ವೇಳೆ ಪತ್ನಿಯನ್ನು ಮನೆಯಲ್ಲಿಯೇ ಕತ್ತು ಹಿಸುಕಿ ಕೊಲೆಗೈದಿದ್ದ.
ತನಿಖೆ ನಡೆಸಿದ ಪೊಲೀಸರು ಗೋಪಿಯನ್ನು ಬಂಧಿಸಿದ್ದಾರೆ. ಗೋಪಿಯ ಪ್ರೀತಿ ಹುಚ್ಚಾಟ, ವಿಲಕ್ಷಣ ಮನಃಸ್ಥಿತಿಗೆ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.

