HomeKarnatakaಶಿವಮೊಗ್ಗ ಗಲಾಟೆ: ಇದು ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣದ ಪರಮಾವಧಿ; ಪ್ರಹ್ಲಾದ್ ಜೋಶಿ ವಾಗ್ದಾಳಿ

ಶಿವಮೊಗ್ಗ ಗಲಾಟೆ: ಇದು ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣದ ಪರಮಾವಧಿ; ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಶಿವಮೊಗ್ಗದ ರಾಗಿಗುಡ್ದದಲ್ಲಿ ನಡೆದ ಕಲ್ಲು ತೂರಾಟ, ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣದ ಪರಮಾವಧಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಗಿಗುಡ್ಡ ಗಲಾಟೆಯನ್ನು ರಾಜ್ಯ ಸರ್ಕಾರ ಇನ್ನೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಗಲಭೆಕೋರರಿಗೆ ಕಾಂಗ್ರೆಸ್ ಸರ್ಕಾರದಿಂದ ರಕ್ಷಣೆ ಇದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾಕಿಸ್ತಾನ್ ಜಿಂದಾಬಾದ್ ಅಂತ ಘೋಷಣೆ ಕೂಗುವವರನ್ನು, ತಲ್ವಾರ್ ಹಿಡಿದು ಬೆದರಿಕೆ ಹಾಕುವವರನ್ನು ರಕ್ಷಣೆ ಮಾಡಲು ಹೊರಟಿದ್ದಾರೆ. ದೇಶದ್ರೋಹಿಗಳ, ಗಲಭೆಕೋರರ ಪರ ನಿಲ್ಲೋರನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular