HomeCrimeBIG NEWS: ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣ; 24 ಜನರ ವಿರುದ್ಧ FIR ದಾಖಲು

BIG NEWS: ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣ; 24 ಜನರ ವಿರುದ್ಧ FIR ದಾಖಲು

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ನಡೆದಿದ್ದು, ಕಿಡಿಗೇಡಿಗಳು ಮನೆಗಳ ಮೇಲೆ, ಸಿಕ್ಕ ಸಿಕ್ಕವರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಪೊಲೀಸರು ಸೇರಿದಂತೆ 7 ಜನರು ಗಾಯಗೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಪ್ರಕರಣದ 8 ಜನರು ತಲೆಮರೆಸಿಕೊಂಡಿದ್ದಾರೆ. 60 ಜನರ ವಿಚಾರಣೆ ನಡೆಸಲಾಗಿದೆ

ಘಟನೆಗೆ ಸಂಬಂಧಿಸಿದಂತೆ ಫೋಟೋ, ವಿಡಿಯೋ ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಕಲ್ಲು ತೂರಾಟ ನಡೆಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ರಾಗಿಗುಡ್ಡ ಹೊರತುಪಡಿಸಿ ಶಿವಮೊಗ್ಗ ನಗರಾದ್ಯಂತ ಸಹಜ ಸ್ಥಿತಿ ಇದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular