HomeKarnatakaBIG NEWS: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಅನಾಮಧೇಯ ಬಾಕ್ಸ್ ಗಳು ಪತ್ತೆ; ಪೊಲೀಸರಿಂದ ಪರಿಶೀಲನೆ

BIG NEWS: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಅನಾಮಧೇಯ ಬಾಕ್ಸ್ ಗಳು ಪತ್ತೆ; ಪೊಲೀಸರಿಂದ ಪರಿಶೀಲನೆ

ಶಿವಮೊಗ್ಗ: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಎರಡು ಅನಾಮಧೇಯ ಬಾಕ್ಸ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಬಾಕ್ಸ್ ಗಳ ಮೇಲೆ ಮೇಡ್ ಇನ್ ಬಾಂಗ್ಲಾದೇಶ ಹಾಗೂ ಫುಡ್ ಗ್ರೈನ್ಸ್ ಆಂಡ್ ಶುಗರ್ಸ್ ಎಂದು ಬರೆಯಲಾಗಿದೆ. ಬಾಂಬ್ ಸ್ಕ್ವಾಡ್ ಹಾಗೂ ಶ್ವಾನ ದಳ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಕ್ಸ್ ಪತ್ತೆಯಾದ ಸ್ಥಳದಲ್ಲಿ ಪೊಲೀಸರು ಬ್ಯಾರಿಕೇಡ್ ಗಳನ್ನು ಅಳವಡಿಸಿ ಯಾರೂ ಸಮೀಪಕ್ಕೆ ಹೋಗದಂತೆ ಕಟ್ಟೆಚ್ಚರ ವಹಿಸಿದ್ದಾರೆ. ಎರಡೂ ಬಾಕ್ಸ್ ಗಳು ನಿನ್ನೆಯಿಂದಲೂ ಪಾರ್ಕಿಂಗ್ ಲಾಟ್ ನಲ್ಲಿಯೇ ಇದೆ ಎನ್ನಲಾಗಿದೆ. ಯಾರೂ ಕೂಡ ಬಾಕ್ಸ್ ತೆಗೆದುಕೊಂಡು ಹೋಗಿಲ್ಲ. ಅನುಮಾನಗೊಂಡ ಪೊಲೀಸರು ಇಂದು ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular