ಶಿವಮೊಗ್ಗ: ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ ಜಿಲ್ಲೆಯ ಪಿಳ್ಳಂಗಿರಿ ಗ್ರಾಮದಲ್ಲಿ ನಡೆದಿದೆ.
17 ವರ್ಷದ ಪ್ರೇಮ್ ಕುಮಾರ್ ಮೃತ ವಿದ್ಯಾರ್ಥಿ. ಶಿವಮೊಗ್ಗ ನಗರದ ನಿವಾಸಿ. ಸ್ನೇಹಿತರ ಜೊತೆ ಪಿಳ್ಳಂಗಿರಿಯ ದೇವಸ್ಥಾನಕ್ಕೆ ಹೋಗಿದ್ದ ಪ್ರೇಮ್ ಕುಮಾರ್, ತುಂಗಾನದಿಯಲ್ಲಿ ಈಜಲು ಇಳಿದಿದ್ದಾನೆ. ಈ ವೇಳೆ ನೀರಿನಲ್ಲಿ ಮುಳುಗಿ ಪ್ರೇಮ್ ಕುಮಾರ್ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

