ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಕಾಲೇಜು ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಕುಶಾವತಿ ಬಳಿ ವಿದ್ಯಾರ್ಥಿ ಶವ ಪತ್ತೆಯಾಗಿದೆ. 19 ವರ್ಷದ ತೇಜಸ್ವಿ ಮೃತ ವಿದ್ಯಾರ್ಥಿ. ಸ್ನೇಹಿತರೊಂದಿಗೆ ತುಂಗಾನದಿ ಬಳಿ ಬಂದಿದ್ದ ವಿದ್ಯಾರ್ಥಿ, ಈಜಲೆಂದು ನದಿಗೆ ಇಳಿದಿದ್ದಾನೆ. ಈ ವೇಳೆ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಮೃತ ವಿದ್ಯಾರ್ಥಿ ಬಾಳೆಬೈಲು ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದ. ಮುಳುಗು ತಜ್ಞ ಪ್ರದೀಪ್ ಪೂಜಾರಿ ನದಿಯಿಂದ ಶವವನ್ನು ಹೊರತೆಗಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

