HomeKarnatakaBIG NEWS: ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ ಪ್ರಕರಣ: ಇಬ್ಬರು ಅಪ್ರಾಪ್ತರು ಪೊಲೀಸ್ ವಶಕ್ಕೆ

BIG NEWS: ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ ಪ್ರಕರಣ: ಇಬ್ಬರು ಅಪ್ರಾಪ್ತರು ಪೊಲೀಸ್ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತ ಬಾಲಕರಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ಪೊಲೀಸರು ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣ ಶಿವಮೊಗ್ಗ ಜಿಲ್ಲೆಯಾದ್ಯಂತ ಸಂಚಲನ ಸೃಸ್ಟಿಸಿದ್ದು, ಮುಂಜಾಗೃತಾ ಕ್ರಮವಾಗಿ ಪೊಲೀಸರು ಜಿಲ್ಲೆಯಾದ್ಯಂತ ಕಟ್ಟೆಚ್ಚರ ಘೋಷಿಸಿದ್ದಾರೆ. ಈ ನಡುವೆ ಇಬ್ಬರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

15 ವರ್ಷದ ಸಂಕೇತ್ ಎಂಬ ವಿದ್ಯಾಅರ್ತ್ಜಿ, ಶಾಲೆಯಲ್ಲಿ ವಿಷೇಷ ತರಗತಿ ಮುಗಿಸಿ ರಾತ್ರಿ 8 ಗಂಟೆಗೆ ಮನೆಗೆ ತೆರಳುತ್ತಿದ್ದಾಗ ಸಂಕೇತ್ ಸ್ನೇಹಿತ ಗಿರೀಶ್ ಜೊತೆ ಅನ್ಯಕೋಮಿನ ಮೂವರು ಅಪ್ರಾಪ್ತರು ಜಗಳವಾಡುತ್ತಿದ್ದರು. ಈ ವೇಳೆ ಸಂಕೇತ್ ಜಗಳ ಬಿಡಿಸಲು ಹೋಗಿದ್ದಾನೆ. ಜಗಳ ಬಿಡಿಸಲು ಬಂದ ಸಂಕೇತ್ ಎದೆಗೆ ಜೋರಾಗಿ ಗುದ್ದಿದ್ದಾರೆ. ಸ್ಥಳದಲ್ಲೇ ಕುಸಿದು ಬಿದ್ದ ಸಂಕೇತ್ ನನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಮಾರ್ಗಮಧ್ಯೆಯೇ ಆತ ಸಾವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ. ವಿದ್ಯಾರ್ಥಿಯನ್ನು ಹತ್ಯೆಗೈದ ಅನ್ಯಕೋಮಿನ ಅಪ್ರಾಪ್ತರ ವಿರುದ್ಧ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಮೃತ ವಿದ್ಯಾರ್ಥಿ ಪೋಷಕರು ತಮಗೆ ನ್ಯಾಯಕೊಡಿಸುವಂತೆ ಕಣ್ಣೀರಿಟ್ಟಿದ್ದಾರೆ.

ಘಟನೆ ಬಳಿಕ ಪರಾರಿಯಾಗಲು ಯತ್ನಿಸಿದ್ದ ಇಬ್ಬರು ಅಪ್ರಾಪ್ತ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಮುಂಜಾಗೃತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಿವಮೊಗ್ಗದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಬಿಗಿ ಭದ್ರತೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular