HomeKarnatakaಕ್ಷುಲ್ಲಕ ಕಾರಣಕ್ಕೆ ಬಾಸುಂಡೆ ಬರುವಂತೆ ವಿದ್ಯಾರ್ಥಿಗೆ ಹೊಡೆದ ಶಿಕ್ಷಕ; ಗಾಯಾಳು ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

ಕ್ಷುಲ್ಲಕ ಕಾರಣಕ್ಕೆ ಬಾಸುಂಡೆ ಬರುವಂತೆ ವಿದ್ಯಾರ್ಥಿಗೆ ಹೊಡೆದ ಶಿಕ್ಷಕ; ಗಾಯಾಳು ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಖಾಸಗಿ ಶಾಲೆ ಶಿಕ್ಷಕರೊಬ್ಬರು ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

10ನೇ ತರಗತಿ ವಿದ್ಯಾರ್ಥಿ ಧನುಷ್ ಶಿಕ್ಷಕನಿಂದ ಹಲ್ಲೆಗೊಳಗಾದ ಬಾಲಕ. ಶಿಕ್ಷಕ ಲೋಕೇಶ್ ವಿದ್ಯಾರ್ಥಿಯ ಬೆನ್ನು, ಕಾಲು, ತೊಡೆಗೆ ಬಾಸುಂಡೆ ಬರುವಂತೆ ಕೊಲಿನಿಂದ ಹೊಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿ ಧನುಷ್ ತಾಯಿ ಕೂಡ ಬಂದಿದ್ದರು. ವಿದ್ಯಾರ್ಥಿ ತನ್ನ ತಾಯಿಯ ಮೊಬೈಲ್ ತೆಗೆದುಕೊಂಡು ತಾನು ತಯಾರಿಸಿದ್ದ ವಿಜ್ಞಾನದ ಮಾಡೆಲ್ ಗಳನ್ನು ಚಿತ್ರೀಕರಿಸಿದ್ದ. ಇದೇ ವಿಚಾರವಾಗಿ ಕೋಪಗೊಂಡ ಶಿಕ್ಷಕ ಲೋಕೇಶ್ ವಿದ್ಯಾರ್ಥಿಯನ್ನು ಮನಬಂದಂತೆ ಹೊಡೆದಿದ್ದಾರೆ. ಗಂಭೀರವಾಗಿ ಹಲ್ಲೆಗೊಳಗಾಗಿರುವ ವಿದ್ಯಾರ್ಥಿಯನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಗನ ಮೇಲೆ ಮನಬಂದಂತೆ ಹೊಡೆದಿದ್ದಕ್ಕೆ ಪೋಷಕರು ಶಿಕ್ಷಕನನ್ನು ಪ್ರಶ್ನಿಸಿದ್ದಾರೆ. ಶಿಕ್ಷಕ ಲೋಕೇಶ್ ಪೋಷಕರ ಮೇಲೂ ದರ್ಪ ತೋರಿದ್ದಾರೆ. ಶಿಕ್ಷಕನ ವರ್ತನೆಗೆ ಪೋಷಕರು ಆಡಳಿತ ಮಂಡಳಿಗೆ ದೂರಿದ್ದಾರೆ. ಅಲ್ಲದೇ ವಿನೋಬಾನಗರ ಠಾಣೆಗೂ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular