HomeKarnatakaBIG NEWS: ತುಂಗಾನದಿಯಲ್ಲಿ ದುರಂತ: ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

BIG NEWS: ತುಂಗಾನದಿಯಲ್ಲಿ ದುರಂತ: ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಶಿವಮೊಗ್ಗ: ತುಂಗಾನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭೀಮನಕಟ್ಟೆ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಗೌತಮ್ (26) ಹಾಗೂ ಸುಜಯ್ (28) ಮೃತ ದುರ್ದೈವಿಗಳು. ಈಜಲೆಂದು ನದಿಗಿಳಿದ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೌತಮ್ ಹಗೂ ಸುಜಯ್ ಪ್ರವಾಸಕ್ಕಾಗಿ ತೀರ್ಥಹಳ್ಳಿಗೆ ಬಂದಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿದ್ದು, ಯುವಕರ ಮೃತದೇಹಕ್ಕಾಗಿ ಶೋಧ ನಡೆಸಿದ್ದಾರೆ.

ಪ್ರಸ್ತುತ ಮಾಹಿತಿ ಪ್ರಕಾರ ಗೌತಮ್ ಮೃತದೇಹ ಪತ್ತೆಯಾಗಿದೆ. ಆದರೆ ಸಿಜಯ್ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular