ಬೆಂಗಳೂರು : ಬಸನಗೌಡ ಪಾಟೀಲ್ ಯತ್ನಾಳ್ ಸವಾಲ್ ಸ್ವೀಕರಿಸಿ ಶಾಸಕ ಸ್ಥಾನಕ್ಕೆ ಶಿವಾನಂದ್ ಪಾಟೀಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಯತ್ನಾಳ್ ಹಾಕಿದ ಸವಾಲನ್ನು ಸ್ವೀಕರಿಸಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಯು.ಟಿ ಸ್ಪೀಕರ್ ಕೊಠಡಿಗೆ ತೆರಳಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸ್ಪೀಕರ್ ಈ ರಾಜೀನಾಮೆಯನ್ನು ಅಂಗೀಕರಿಸಿದರೆ ಬಸವನ ಬಾಗೇವಾಡಿ ಕ್ಷೇತ್ರಕ್ಕೆ ಮರುಚುನಾವಣೆ ನಡೆಯಲಿದೆ.
ಶಿವಾನಂದ ಪಾಟೀಲ್ ಹಾಗೂ ವಿಜಯಾನಂದ ಕಾಶಪ್ಪನವರ ಒಂದು ವಾರದಲ್ಲಿ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ಸಭಾಪತಿಯವರಿಂದ ರಾಜೀನಾಮೆ ಅಂಗೀಕಾರ ಮಾಡಿಕೊಂಡು ಬನ್ನಿ, ನೀವು ಪಕ್ಷೇತರರಾಗಿ ಬನ್ನಿ ನಾನು ಬರುವೆ, ಬಾಗೇವಾಡಿಯಲ್ಲೇ ಬಂದು ಮಣ್ಣು ಕೊಡುತ್ತೇನೆಂದು ಹೇಳಿದರು. ಬಸನಗೌಡ ಪಾಟೀಲ್ ಯತ್ನಾಳ್ ಸವಾಲ್ ಸ್ವೀಕರಿಸಿ ಶಾಸಕ ಸ್ಥಾನಕ್ಕೆ ಶಿವಾನಂದ್ ಪಾಟೀಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
You Might Also Like
TAGGED:ಶಿವಾನಂದ್ ಪಾಟೀಲ್