ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಉಂಡೆ ಕೊಬ್ಬರಿಗೆ 1250 ರೂ. ಹೆಚ್ಚುವರಿ ಪ್ರೋತ್ಸಾಹ ಧನ

ಬೆಂಗಳೂರು: ಉಂಡೆ ಕೊಬ್ಬರಿಗೆ ರಾಜ್ಯ ಸರ್ಕಾರದಿಂದ 1,250 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡಲಾಗುವುದು.

ಕೊಬ್ಬರಿ ಬೆಳೆಗಾರರ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಒಂದು ಕ್ವಿಂಟಾಲ್ ಉಂಡೆ ಕೊಬ್ಬರಿಗೆ ಕೇಂದ್ರದ ಬೆಂಬಲ ಬೆಲೆಯ ಮೇಲೆ ರಾಜ್ಯ ಸರ್ಕಾರ 1250 ರೂಪಾಯಿ ಪ್ರೋತ್ಸಾಹ ಧನ ನೀಡಲಿದೆ. ಇದರಿಂದಾಗಿ ರೈತರಿಗೆ ಕ್ವಿಂಟಲ್ ಗೆ 13,000 ರೂ. ಸಿಗಲಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಕೊಬ್ಬರಿ ಬೆಲೆ ಕುಸಿತದ ಕುರಿತ ಚರ್ಚೆಯ ವೇಳೆ ಸಚಿವರು ಉತ್ತರ ನೀಡಿದ್ದಾರೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ 1,250 ರೂ. ಪ್ರೋತ್ಸಾಹತನ ನೀಡಿಲ್ಲ. 1000 ರೂ. ವರೆಗೆ ಪ್ರೋತ್ಸಾಹ ಧನ ನೀಡಲಾಗಿತ್ತು. ಇದೇ ಮೊದಲ ಬಾರಿಗೆ 1,250 ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಈ ಮೊದಲು ಬೆಂಬಲ ಬೆಲೆ ಯೋಜನೆ ಯಡಿ ಕೊಬ್ಬರಿ ಮಾರಾಟ ಮಾಡಿದವರಿಗೆ ಇದು ಅನ್ವಯವಾಗುವುದಿಲ್ಲ ಎಂದರು.

ಕೇಂದ್ರ ಸರ್ಕಾರ ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 11,750 ರೂ. ಬೆಂಬಲ ಬೆಲೆ ನಿಗದಿ ಮಾಡಿದ್ದು, ರಾಜ್ಯ ಸರ್ಕಾರ ಇದರೊಂದಿಗೆ 1,250 ರೂ. ಪ್ರೋತ್ಸಾಹ ಧನ ನೀಡಲಿದೆ. ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್ ಗೆ 16,500 ಹೆಚ್ಚಳ ಮಾಡಬೇಕು. ಉತ್ಪಾದನೆಯ್ಲಲಿ ಶೇ. 50 ರಷ್ಟು ಖರೀದಿಗೆ ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ. ಖರೀದಿ ಅವಧಿ ವಿಸ್ತರಿಸಲು ಕೂಡ ಮನವೇ ಮಾಡಲಾಗಿದ್ದು, ಅವಧಿ ವಿಸ್ತರಣೆಗೆ ಅನುಮತಿ ನೀಡಿದ ನಂತರ ನೋಂದಾಯಿಸುವ ರೈತರಿಗೆ ಪ್ರೋತ್ಸಾಹ ಧನ ಸಿಗಲಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read