ವಿಜಯಪುರ: ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ(55) ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಅವರು ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ರಾತ್ರಿ 9 ಗಂಟೆಗೆ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಟುಂಬದವರು ಕೂಡಲೇ ಸಿಂದಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶಿವಾನಂದ ಪಾಟೀಲ ಸೋಮಜಾಳ ವಿಧಿವಶರಾಗಿದ್ದಾರೆ.
ಅವರಿಗೆ ಸಿಂದಗಿ ಕ್ಷೇತ್ರದ ಜೆಡಿಎಸ್ ಟಿಕೆಟ್ ಘೋಷಿಸಲಾಗಿತ್ತು. ನಿನ್ನೆ ನಾಗಠಾಣದಲ್ಲಿ ಪಂಚರತ್ನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಶಿವಾನಂದ ಭಾಗಿಯಾಗಿದ್ದರು, ಕಾರ್ಯಕ್ರಮ ಮುಗಿದ ನಂತರ ಸಿಂದಗಿ ಪಟ್ಟಣಕ್ಕೆ ತೆರಳಿದ್ದರು.
16 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಶಿವಾನಂದ ಇತ್ತೀಚಿನ ವರ್ಷಗಳಲ್ಲಿ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದರು. ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಮೂಲತಃ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಸೋಮಜಾಳ ಗ್ರಾಮದವರಾಗಿದ್ದಾರೆ.
https://twitter.com/hd_kumaraswamy/status/1616533676866834434
https://twitter.com/hd_kumaraswamy/status/1616533684601114624