ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವಿರೋಧ ಆಯ್ಕೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ತಗಡೂರು 2025- 28 ನೇ ಸಾಲಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸತತ ಮೂರನೇ ಬಾರಿಗೆ ಶಿವಾನಂದ ತಗಡೂರು ಅವರು ಅಧ್ಯಕ್ಷರಾಗಿದ್ದಾರೆ. ಉಪಾಧ್ಯಕ್ಷರಾಗಿ ಹೆಚ್.ಬಿ. ಮದನಗೌಡ, ಮತ್ತಿಕೆರೆ ಜಯರಾಮ್, ಪ್ರಧಾನ ಕಾರ್ಯದರ್ಶಿಯಾಗಿ ಜೆ.ಸಿ. ಲೋಕೇಶ್, ಕಾರ್ಯದರ್ಶಿಗಳಾಗಿ ಪುಂಡಲೀಕ ಬಿ. ಬಾಳೋಜಿ, ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ರಾಜ್ಯ ಖಜಾಂಚಿಯಾಗಿ ಎಂ. ವಾಸುದೇವ ಹೊಳ್ಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಎನ್. ರವಿಕುಮಾರ್ ತಿಳಿಸಿದ್ದಾರೆ.

10 ಜಿಲ್ಲೆಗಳಲ್ಲಿ ಅವಿರೋಧ ಆಯ್ಕೆ: ಅಂತಿಮ ಕಣದಲ್ಲಿ ಉಳಿದ 826 ಅಭ್ಯರ್ಥಿಗಳು

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯು ಜೆ) 2025-2028ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ರಾಜ್ಯ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು, ಖಜಾಂಚಿ ಹುದ್ದೆಗೆ ಅವಿರೋಧ ಆಯ್ಕೆಯಾಗಿದೆ. ರಾಜ್ಯ ಘಟಕ ಮತ್ತು 31 ಜಿಲ್ಲೆಗಳ ಜಿಲ್ಲಾ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಕಾರ್ಯಕಾರಿ ಸಮಿತಿ ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ 784 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಒಟ್ಟು 1447 ಸ್ಪರ್ಧಾಕಾಂಕ್ಷಿಗಳು ನಾಮಪತ್ರಗಳು ಸಲ್ಲಿಸಿದ್ದರು. 10 ಜಿಲ್ಲಾ ಘಟಕಗಳು ಮತ್ತು 2 ಹೊರನಾಡಿನ ಘಟಕಗಳಿಗೆ (ಮುಂಬಯಿ ಮತ್ತು ಕಾಸರಗೋಡು) ಅವಿರೋಧ ಆಯ್ಕೆಯಾಗಿದೆ.

ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾದ ಗುರುವಾರ 376 ಜನರು ತಮ್ಮ ಉಮೇದುವಾರಿಕೆಯನ್ನು ವಾಪಸ್ ಪಡೆದಿದ್ದಾರೆ. 4 ಜಿಲ್ಲೆಗಳಲ್ಲಿ ತಲಾ ಒಂದು ಸ್ಥಾನ ಇನ್ನೆರಡು ಜಿಲ್ಲೆಗಳಲ್ಲಿ 2 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ದಿನಾಂಕ: 09-11-2025 ರಂದು ಭಾನುವಾರ ಜಿಲ್ಲಾ ಮತ್ತು ರಾಜ್ಯ ಘಟಕದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಯಲಿದೆ ಎಂದು ಎನ್. ರವಿಕುಮಾರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read