HomeKarnatakaಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಭಾವ: ಶಿವನಸಮುದ್ರ ಜಲವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಭಾವ: ಶಿವನಸಮುದ್ರ ಜಲವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

ಮಂಡ್ಯ: ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆ, ಜಲವಿದ್ಯುತ್ ಉತ್ಪಾದನೆಗೂ ನೀರಲ್ಲದೇ ಸಂಕಷ್ಟ ಎದುರಾಗಿದೆ.

ಮಳೆ ಅಭಾವದಿಂದಾಗಿ ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಜಲವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಳೆಯಿಲ್ಲದೇ ಕಾವೇರಿ ನದಿಯಲ್ಲಿ ಸಮರ್ಪಕವಾದ ನೀರಿನ ಹರಿವು ಇಲ್ಲದ ಕಾರಣ ಕಳೆದ ಒಂದೂವರೆ ತಿಂಗಳಿಂದ ಜಲವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಹಲವು ವರ್ಷಗಳ ಬಳಿಕ ವಿದ್ಯುತ್‌ ಉತ್ಪಾದನೆ ಸಂಪೂರ್ಣ ನಿಂತುಹೋಗಿದೆ.

ಕೆಆರ್‌ಎಸ್‌ ಅಥವಾ ಕಬಿನಿ ಜಲಾಶಯದಿಂದ ನೀರು ಬಿಟ್ಟರೆ ಮಾತ್ರವೇ ವಿದ್ಯುತ್‌ ಉತ್ಪಾದನೆ ಕೆಲಸ ನಡೆಯುತ್ತದೆ. ಶಿವನಸಮುದ್ರ ಜಲವಿದ್ಯುತ್ ಕೇಂದ್ರದಲ್ಲಿ ನಿತ್ಯ 42 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿತ್ತು. ಅದಕ್ಕಾಗಿ ನಿತ್ಯ 1,450 ಕ್ಯೂಸೆಕ್ ನೀರಿನ ಅಗತ್ಯ ಇತ್ತು. ಆದರೆ ಈ ಬಾರಿ ಮಳಯ ಅಭಾವದಿಂದಾಗಿ ಕಾವೇರಿ ನದಿ ಬರಿದಾಗಿದೆ. ಪರಿಣಾಮ ಜಲ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಂಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular