HomeEntertainmentಶಿವನಸಮುದ್ರಕ್ಕೆ ಭೇಟಿ ನೀಡಿದ ನಟ ಶಿವರಾಜ್ ಕುಮಾರ್ ದಂಪತಿ: ಆದಿಶಕ್ತಿಗೆ ಸೀರೆ ಸಮರ್ಪಣೆ

ಶಿವನಸಮುದ್ರಕ್ಕೆ ಭೇಟಿ ನೀಡಿದ ನಟ ಶಿವರಾಜ್ ಕುಮಾರ್ ದಂಪತಿ: ಆದಿಶಕ್ತಿಗೆ ಸೀರೆ ಸಮರ್ಪಣೆ

ಚಾಮರಾಜನಗರ: ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಚಾಮರಾಜನಗರದ ಶಿವನಸಮುದ್ರಕ್ಕೆ ಭೇಟಿ ನೀಡಿ, ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಕಾವೇರಿ ನದಿಗೆ ಬಾಗಿನ ಅರ್ಪಿಸಿ, ಗಣಪತಿ ದೇವಸ್ಥಾನ, ಮಧ್ಯರಂಗ ಹಾಗೂ ಮೀನಾಕ್ಷಿ ಸಮೇತ ಸೋಮೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀಚಕ್ರ ದರ್ಶನ ಪಡೆದು ಆದಿಶಕ್ತಿ ಮಾರಮ್ಮ ದೇವಸ್ಥಾನಕ್ಕೆ ಸೂಈರೆ ಸಮರ್ಪಿಸಿದರು.

ಕೆಲ ದಿನಗಳ ಹಿಂದೆ ಶಿವಣ್ಣ ದಂಪತಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಮುಡಿ ಕೊಟ್ಟಿದ್ದರು. ಇದೀಗ ಶಿವನಸಮುದ್ರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಿವರಾಜ್ ಕುಮಾರ್ ಶೀಘ್ರದಲ್ಲಿ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುತ್ತಿದು, ಅದಕ್ಕೂ ಮುನ್ನ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular