HomeKarnatakaಅನಾರೋಗ್ಯದಿಂದ ಚೇತರಿಸಿಕೊಂಡು ಮತ್ತೆ ಚುನಾವಣಾ ಪ್ರಚಾರ ಆರಂಭಿಸಿದ ಶಿವರಾಜ್ ಕುಮಾರ್

ಅನಾರೋಗ್ಯದಿಂದ ಚೇತರಿಸಿಕೊಂಡು ಮತ್ತೆ ಚುನಾವಣಾ ಪ್ರಚಾರ ಆರಂಭಿಸಿದ ಶಿವರಾಜ್ ಕುಮಾರ್

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಕಣಕ್ಕಿಳಿದಿದ್ದು, ಪತ್ನಿ ಪರ ನಟ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ ನಡೆಸಿದ್ದಾರೆ.

ನಿರಂತರ ಚುನಾವಣಾ ಪ್ರಚಾರದಿಂದ ಕೊಂಚ ಅನಾರೋಗ್ಯಕ್ಕೀಡಾಗಿದ್ದ ಶಿವರಾಜ್ ಕುಮಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚೇತರಿಸಿಕೊಂಡಿರುವ ಶಿವರಾಜ್ ಕುಮಾರ್, ಪತ್ನಿ ಪರ ಪ್ರಚಾರಕ್ಕಾಗಿ ಮತ್ತೆ ಶಿವಮೊಗ್ಗ ಅಖಾಡಕ್ಕೆ ಇಳಿದಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಪರ ಶಿವಮೊಗ್ಗದಾದ್ಯಂತ ಮತಯಾಚಿಸುತ್ತಿದ್ದಾರೆ. ನಾನು ನಟ ಶಿವರಾಜ್ ಕುಮಾರ್ ಆಗಿ ಬಂದಿಲ್ಲ. ಗೀತಾಳ ಗಂಡನಾಗಿ ಇಲ್ಲಿಗೆ ಬಂದಿದ್ದೇನೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೀತಾರನ್ನು ಗೆಲ್ಲಿಸುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular