HomeKarnatakaಕಾಂಗ್ರೆಸ್ ಕಾರ್ಯಕರ್ತನ ಮನೆಯಲ್ಲಿ ಹೋಳಿಗೆ ಊಟ ಸವಿದ ಶಿವಣ್ಣ, ಗೀತಾ

ಕಾಂಗ್ರೆಸ್ ಕಾರ್ಯಕರ್ತನ ಮನೆಯಲ್ಲಿ ಹೋಳಿಗೆ ಊಟ ಸವಿದ ಶಿವಣ್ಣ, ಗೀತಾ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ನಟ ಶಿವರಾಜ್ ಕುಮಾರ್ ಅವರು ಯುಗಾದಿ ದಿನವೂ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಶ್ರೀರಾಮನಗರ ಬೆಂಕಿನಗರದಲ್ಲಿ ಕಾರ್ಯಕರ್ತ ಗಿರೀಶ್ ಅವರ ಮನೆಯಲ್ಲಿ ಹೋಳಿಗೆ ಊಟ ಸವಿದಿದ್ದಾರೆ. ಶಿವಮೊಗ್ಗದ ಬಸವ ಕೇಂದ್ರಕ್ಕೆ ಭೇಟಿ ನೀಡಿ ಬಸವ ಮರುಳಸಿದ್ದ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ.

ಬೆಂಕಿನಗರ ಶ್ರೀರಾಮನಗರ ನಿವಾಸಿಗಳು ಆಯೋಜಿಸಿದ್ದ ನವ ಸಂವತ್ಸರದ ಸಂಭ್ರಮದಲ್ಲಿ ಗೀತಕ್ಕ ಶಿವಣ್ಣ ನಮ್ಮೊಂದಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ದಂಪತಿ ಮಾತನಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿಗೆ ಭೇಟಿ ನೀಡಿದ ಶಿವಣ್ಣ, ಗೀತಾ ಶಿವರಾಜಕುಮಾರ್ ಲಂಬಾಣಿ ತಾಂಡಾದ ಜನರೊಂದಿಗೆ ಯುಗಾದಿ ಆಚರಿಸಿದ್ದಾರೆ. ಮೊದಲಿಗೆ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದು, ರೋಡ್ ಶೋ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ತೆರಳಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ಈ ಬಾರಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಗೀತಾ ಶಿವರಾಜ್ ಕುಮಾರ್ ಅವರಿಗೆ ಒಮ್ಮೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದ್ದಾರೆ.

ಕಳೆದ ಬಾರಿಗೂ ಈ ಬಾರಿಗೂ ತುಂಬಾ ವ್ಯತ್ಯಾಸವಿದೆ. ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ. ಹೆಣ್ಣು ಮಕ್ಕಳು ಗೀತಾ ಶಿವರಾಜಕುಮಾರ್ ಗೆಲ್ಲಲಿ ಎಂದು ಬಯಸುತ್ತಿದ್ದಾರೆ. ಹೊಸ ಅಲೆ ಬರಬೇಕು, ಹೊಸಬರು ಬರಬೇಕು. ಗೀತಾ ಅವರಿಗೆ ಶಕ್ತಿ ಕೊಡಿ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಹಾಡುಗಳನ್ನು ಹಾಡಿ ರಂಜಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular