HomeKarnatakaಅಚಲವಾದ ಬೆಂಬಲಕ್ಕೆ ಕೃತಜ್ಞರಾಗಿರುತ್ತೇವೆ: ಗೀತಾ ಶಿವರಾಜ್ ಕುಮಾರ್

ಅಚಲವಾದ ಬೆಂಬಲಕ್ಕೆ ಕೃತಜ್ಞರಾಗಿರುತ್ತೇವೆ: ಗೀತಾ ಶಿವರಾಜ್ ಕುಮಾರ್

ಶಿವಮೊಗ್ಗ: ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಜಯಗಳಿಸಿದ್ದಾರೆ.

ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಪ್ರಚಾರ ನಡೆಸಿದ್ದರು. ಫಲಿತಾಂಶದಿಂದಾಗಿ ಅಭಿಮಾನಿಗಳಿಗೆ ಬೇಸರವಾಗಿದ್ದು, ಫಲಿತಾಂಶದ ಕುರಿತಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

“ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಫಲಿತಾಂಶ ನಮ್ಮ ಕಡೆ ಆಗದಿರಬಹುದು. ಆದರೆ, ನಿಮ್ಮೂಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ಈ ನಿರ್ಣಯಕ್ಕೆ ತಲೆ ಬಾಗುತ್ತ, ನಾವು ಭವಿಷ್ಯದ ಬದಲಾವಣೆಗೆ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗು ವಿಶ್ವಾಸವಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular