HomeKarnatakaಬಿ.ಕೆ. ಶಿವರಾಂ ನಿವಾಸದ ಬಳಿ ಸ್ಪಂದನಾ ಮೃತದೇಹ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಸಾಂತ್ವನ ಹೇಳಿದ ಶಿವಣ್ಣ...

ಬಿ.ಕೆ. ಶಿವರಾಂ ನಿವಾಸದ ಬಳಿ ಸ್ಪಂದನಾ ಮೃತದೇಹ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಸಾಂತ್ವನ ಹೇಳಿದ ಶಿವಣ್ಣ ದಂಪತಿ

ಬೆಂಗಳೂರು: ಮೂರು ದಿನಗಳ ಹಿಂದೆ ಥೈಲ್ಯಾಂಡ್ ನಲ್ಲಿ ಮೃತಪಟ್ಟ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹವನ್ನು ರಾತ್ರಿ ಒಂದು ಗಂಟೆಗೆ ಬೆಂಗಳೂರಿಗೆ ತರಲಾಗಿದೆ.

1:30 ಸುಮಾರಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ಬಿ.ಕೆ. ಶಿವರಾಂ ನಿವಾಸಕ್ಕೆ ಮೃತದೇಹ ತರಲಾಗಿದ್ದು, ಕುಟುಂಬದವರು ಪೂಜೆ ನೆರವೇರಿಸಿದ್ದಾರೆ. ಮಧ್ಯಾಹ್ನ 2 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಟುಂಬದವರು, ಸಂಬಂಧಿಕರು, ಆಪ್ತರು, ಬಿ.ಕೆ. ಶಿವರಾಂ ನಿವಾಸಕ್ಕೆ ಆಗಮಿಸಿ, ಪೂಜೆ ಸಲ್ಲಿಸಿ ದರ್ಶನ ಪಡೆಯಲು ಮುಂದಾಗಿದ್ದಾರೆ. ನಟ ಶಿವರಾಜ್ ಕುಮಾರ್ ದಂಪತಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ವಿಜಯ್ ರಾಘವೇಂದ್ರ, ಶ್ರೀ ಮುರುಳಿ ಸೇರಿದಂತೆ ಕುಟುಂಬದವರು ಪೂಜಾ ಕಾರ್ಯ ನೆರವೇರಿಸಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular