BIG NEWS: ಕನ್ನಡದಲ್ಲಿ ನಾಮಫಲಕ ಅಳವಡಿಸಿಕೊಳ್ಳದ ಸಂಘ-ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ

ಬೆಳಗಾವಿ: ಕಡ್ಡಾಯವಾಗಿ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಸಚಿವರು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಮೂಲ ಕಾಯಿದೆ 17ನೇ ಪ್ರಕರಣದ ಆರನೇ ಉಪಪ್ರಕರಣದಂತೆ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತ ಪಡಿಸಿಕೊಳ್ಳತಕ್ಕದ್ದು ಎಂದಿದೆ. ಕಾಯ್ದೆಯ ಅನುಷ್ಠಾನ ಜವಾಬ್ದಾರಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳದ್ದಾಗಿರುತ್ತದೆ. ಈ ಅಧಿನಿಯಮದಂತೆ ಕ್ರಮವಹಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕನ್ನಡದಲ್ಲಿ ನಾಮಫಲಕ ಅಳವಡಿಸಿಕೊಳ್ಳದ ಸಂಘ-ಸಂಸ್ಥೆಗಳ ವಿರುದ್ಧ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ನಿಯಮ 23ರ ಅನುಸಾರ ಮೊದಲನೆಯ ಅಪರಾಧಕ್ಕಾಗಿ ರೂ.5000, ಎರಡನೇ ಅಪರಾಧಕ್ಕಾಗಿ ರೂ. 10,000 ಮತ್ತು ನಂತರದ ಪ್ರತಿ ಅಪರಾಧಕ್ಕಾಗಿ ರೂ. 20,000 ರವರೆಗೆ ವಿಸ್ತರಿಸಬಹುದಾದ ಜುಲ್ಮಾನೆಗೆ ಮತ್ತು ಪರವಾನಗಿಯನ್ನು ರದ್ದುಗೊಳಿಸುವುದಕ್ಕೆ ಗುರಿಯಾಗುವುದು ಎಂದಿರುತ್ತದೆ. ಈ ಅಧಿನಿಯಮದಂತೆ ಕ್ರಮವಹಿಸಲು ಅನುಷ್ಠಾನ ಅಧಿಕಾರಿಗಳಾದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದು ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read