HomeKarnatakaಬಿಜೆಪಿಗೆ ಬಿಗ್ ಶಾಕ್: ಕಾಂಗ್ರೆಸ್ ವಿರುದ್ಧ ಪ್ರತಿಭಟನೆಗೆ ಗೈರಾದ ಶಾಸಕ ಹೆಬ್ಬಾರ್

ಬಿಜೆಪಿಗೆ ಬಿಗ್ ಶಾಕ್: ಕಾಂಗ್ರೆಸ್ ವಿರುದ್ಧ ಪ್ರತಿಭಟನೆಗೆ ಗೈರಾದ ಶಾಸಕ ಹೆಬ್ಬಾರ್

ಕಾರವಾರ: ಬಿಜೆಪಿ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ವದಂತಿ ಹರಡಿದ್ದು, ಇದೇ ಹೊತ್ತಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಶಾಸಕ ಶಿವರಾಮ ಹೆಬ್ಬಾರ್ ಗೈರು ಹಾಜರಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಸೋಮವಾರ ಪ್ರತಿಭಟನೆ ನಡೆಸಲಾಗಿದೆ. ಯಲ್ಲಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಭಾಗವಹಿಸದೇ ದೂರ ಉಳಿದಿದ್ದಾರೆ. ಅವರ ಬೆಂಬಲಿಗರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನುವ ವದಂತಿಗಳ ನಡುವೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಶಿವರಾಮ ಹೆಬ್ಬಾರ್ ಭಾಗವಹಿಸದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಆದರೆ, ಶಿವರಾಮ ಹೆಬ್ಬಾರ್ ಅವರು ಕಾರ್ಯಕ್ರಮ ನಿಮಿತ್ತ ಮುಂಡಗೋಡಕ್ಕೆ ತೆರಳಿದ್ದರಿಂದ ಪ್ರತಿಭಟನೆಯಲ್ಲಿ ಭಾಗವಹಿಸಿರಲಿಲ್ಲ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular