HomeLatest NewsBIG NEWS: ಪಕ್ಷದ ನಿರ್ಧಾರವನ್ನು ಸ್ವಾಗತಿಸುತ್ತೇನೆ; ಮುಂದಿನ ನಡೆ ಬಗ್ಗೆ ಕಾದು ನೋಡಿ ಎಂದ BJP...

BIG NEWS: ಪಕ್ಷದ ನಿರ್ಧಾರವನ್ನು ಸ್ವಾಗತಿಸುತ್ತೇನೆ; ಮುಂದಿನ ನಡೆ ಬಗ್ಗೆ ಕಾದು ನೋಡಿ ಎಂದ BJP ಉಚ್ಛಾಟಿತ ಶಾಸಕ ಶಿವರಾಮ್ ಹೆಬ್ಬಾರ್

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಅವರನ್ನು ಬಿಜೆಪಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದೆ.

ಬಿಜೆಪಿಯಿಂದ ಉಚ್ಛಾಟನೆ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್, ಪಕ್ಷದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ. ಶೀಘ್ರದಲ್ಲಿಯೇ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಹೇಳುತ್ತೇನೆ ಎಂದಿದ್ದಾರೆ.

ಪಕ್ಷದ ವಿರುದ್ಧ ನಾನು ಮಾತನಾಡಲು ಕಾರಣವೇನೆಂದು ಹೇಳುತ್ತೇನೆ. ಯಾವುದೇ ಸಭೆ, ಸಮಾರಂಭಗಳಿಗೆ ನನ್ನನ್ನು ಕರೆಯುತ್ತಿರಲಿಲ್ಲ, ಹೀಗಿರುವಾಗ ನಾನಾಗೆಯೇ ಹೋಗುವ ಜಾಯಮಾನ ನನ್ನದಲ್ಲ. ಪಕ್ಷದಿಂದ ಉಚ್ಛಾಟನೆ ಮಾಡಿದ್ದಕ್ಕೆ ಬಿಜೆಪಿಗೆ ಆಗುವ ನಷ್ಟದ ಬಗ್ಗೆ ಅವರು ಯೋಚಿಸಲಿ. ನಮಗೆ ಆಗುವ ಲಾಭ-ನಷ್ಟದ ಬಗ್ಗೆ ನಾವು ಯೋಚಿಸುತ್ತೇವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ ವಾರ ಬೆಂಗಳೂರಿಗೆ ಬಂದು ಎಲ್ಲವನ್ನೂ ಮಾತನಾಡುತ್ತೇನೆ. ನನ್ನ ಮುಂದಿನ ನಡೆ ಬಗ್ಗೆ ಕಾದು ನೋಡಿ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular