HomeKarnatakaBIG NEWS: ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್

BIG NEWS: ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್

ಕಾರವಾರ: ಬಿಜೆಪಿಗೆ ವಲಸೆ ಬಂದ ಕಾಂಗ್ರೆಸ್ ನಾಯಕರು ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ದು, ಈಗಾಗಲೇ ಕೆಲ ಶಾಸಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ನಡುವೆ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್, ನಾನು ಸಧ್ಯ ಬಿಜೆಪಿಯಲ್ಲಿದ್ದೇನೆ. ನಾಳೆ ಬಗ್ಗೆ ನನಗೆ ಗೊತ್ತಿಲ್ಲ. ಭವಿಷ್ಯದ ಬಗ್ಗೆ ಹೇಳಲು ನಾನು ಜ್ಯೋತಿಷಿ ಅಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ ಎನ್ನಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಪರೇಷನ್ ಹಸ್ತ ಚರ್ಚೆ ಬೆನ್ನಲ್ಲೇ ಶಾಸಕ ಶಿವರಾಮ್ ಹೆಬ್ಬಾರ್, ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಇಂದು ಬಿಜೆಪಿಯಲ್ಲಿದ್ದೇನೆ. ನಾಳೆ ಬಗ್ಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ನತ್ತ ಮುಖ ಮಾಡಿರುವುದು ಬಹುತೇಕ ಖಚಿತ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular