HomeEntertainmentBIG NEWS: ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ನಟ ಶಿವರಾಜ್ ಕುಮಾರ್; ಶಿವಣ್ಣನಿಗೆ ಆಗಿದ್ದೇನು?

BIG NEWS: ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ನಟ ಶಿವರಾಜ್ ಕುಮಾರ್; ಶಿವಣ್ಣನಿಗೆ ಆಗಿದ್ದೇನು?

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಆರೋಗ್ಯದಲ್ಲಿ ಏರುಪೇರಾದ ಕಾರಣ ನಿನ್ನೆ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು ಬೆಳಿಗ್ಗೆ 11 ಗಂಟೆಗೆ ಶಿವರಾಜ್ ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಶಿವಣ್ಣನಿಗೆ ಗಂಭೀರ ಸಮಸ್ಯೆ ಇಲ್ಲ. ಕಿಡ್ನಿ ಸ್ಟೋನ್ ಆಗಿತ್ತು. ಹಾಗಾಗಿ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ 11ಗಂಟೆಗೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಶಿವರಾಜ್ ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಠಲಮಲ್ಯ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular