HomeEntertainmentನಟ ಶಿವರಾಜ್ ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ನಟ ಶಿವರಾಜ್ ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಚೇತರಿಸಿಕೊಂಡಿರುವ ಶಿವರಾಜ್ ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ನಾಗವಾರದ ತಮ್ಮ ನಿವಾಸಕ್ಕೆ ತೆರಳಿದ್ದಾರೆ.

ಇನ್ನು ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ವೈದ್ಯರು, ಶಿವರಾಜ್ ಕುಮಾರ್ ಅವರಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ. ಕಿಡ್ನಿ ಸ್ಟೋನ್ ಆಗಿತ್ತು. ಹಾಗಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular