HomeKarnatakaBIG NEWS: ಶೋಭಾ ಕರಂದ್ಲಾಜೆ ಕಾರು ಅಪಘಾತದಲ್ಲಿ ವ್ಯಕ್ತಿ ಸಾವು ಪ್ರಕರಣ; ಇಬ್ಬರು ಚಾಲಕರ ವಿರುದ್ಧ...

BIG NEWS: ಶೋಭಾ ಕರಂದ್ಲಾಜೆ ಕಾರು ಅಪಘಾತದಲ್ಲಿ ವ್ಯಕ್ತಿ ಸಾವು ಪ್ರಕರಣ; ಇಬ್ಬರು ಚಾಲಕರ ವಿರುದ್ಧ FIR ದಾಖಲು

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರದ ವೇಳೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ಪ್ರಕರಣ ಸಂಬಂಧ ಇಬ್ಬರು ಚಾಲಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಕಾರು ಹಾಗೂ ಬಸ್ ಚಾಲಕರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 279, 304 (A), 283 ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗಿದೆ.

ಪ್ರಕರಣ ಸಂಬಂಧ ಪೊಲೀಸರು ಇಬ್ಬರು ಚಾಲಕರಿಗೂ ನೋಟಿಸ್ ನೀಡಿದ್ದಾರೆ. ಇನ್ನೊಂದೆಡೆ ಸಾವನ್ನಪ್ಪಿದ ವ್ಯಕ್ತಿಯ ಮರಣೋತ್ತರ ಪರೀಕ್ಷೆ ವರದಿಗಾಗಿ ಪೊಲೀಸರು ಕಾಯುತ್ತಿದ್ದು, ವರದಿ ಬಂದ ಬಳಿಕ ಸಾವು ಹೇಗೆ ಸಂಭವಿಸಿದೆ ಎಂಬುದು ಖಚಿತವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular