ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ನರೇಂದ್ರ ಮೋದಿ ಹಾಗೂ ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ರಾಜ್ಯದಿಂದ ಐದು ಮಂದಿ ಕೇಂದ್ರ ಸಚಿವರಾಗಿರುವುದು ವಿಶೇಷವಾಗಿದೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟದ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಂಡ್ಯ ಸಂಸದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಿಜೆಪಿಯಿಂದ ರಾಜ್ಯಸಭೆಯಲ್ಲಿ ಕರ್ನಾಟಕ ಪ್ರತಿನಿಧಿಸುತ್ತಿರುವ ನಿರ್ಮಲಾ ಸೀತಾರಾಮನ್, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬೆಂಗಳೂರು ಉತ್ತರ ಸಂಸದೆ ಶೋಭಾ ಕರಂದ್ಲಾಜೆ, ತುಮಕೂರು ಸಂಸದ ವಿ. ಸೋಮಣ್ಣ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಕಳೆದ ಅವಧಿಯಲ್ಲಿಯೂ ಸಚಿವರಾಗಿದ್ದರು. ಹೆಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ ಮೊದಲ ಬಾರಿಗೆ ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.
https://twitter.com/ani_digital/status/1799811396177482005
https://twitter.com/ANI/status/1799813074549096888
https://twitter.com/ANI/status/1799806525776773351
https://twitter.com/ANI/status/1799829306174287954