HomeKarnatakaBIG NEWS: ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲು 15,000 ರೂಪಾಯಿ ವಸೂಲಿ; ಡಿಸಿಎಂ ವಿರುದ್ಧ ಕೇಂದ್ರ ಸಚಿವೆ...

BIG NEWS: ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲು 15,000 ರೂಪಾಯಿ ವಸೂಲಿ; ಡಿಸಿಎಂ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರು ಹಾಲು ಕರೆಯುವ ಹಸು ಹಾಗಾಗಿ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ಮಾತ್ರ ಒತ್ತು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಡಿಸಿಎಂ ಬೆಂಗಳೂರಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಶಾನ್ಯ ರಾಜ್ಯದವರು ನಡೆಸುತ್ತಿರುವ ಅಂಗಡಿಗಳ ನಿಯೋಗ ಭೇಟಿಯಾಗಿತ್ತು. ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲೂ ಮಾಸಿಕ 15,000 ರೂಪಾಯಿ ವಸೂಲಿ ಮಾಡಲಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಬಿಬಿಎಂಪಿಯವರು ಮಾಸಿಕ 15,000 ರೂಪಾಯಿ ಕೇಳುತ್ತಾರೆ ಎಂದಿದ್ದಾರೆ. ಇದೇ ರೀತಿ ಮುಂದುವರೆದರೆ ಅವರೆಲ್ಲರೂ ಬೆಂಗಳೂರು ಬಿಡುತ್ತಾರೆ ಎಂದು ಹೇಳಿದರು.

ಯಾವ ಅಧಿಕಾರಿಗಳೂ ಸಮಾಧಾನದಿಂದ ಇಲ್ಲ. ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಇಂತಹ ಸ್ಥಿತಿ ಬಂದಿದೆ ಎಂದು ವಾಗ್ದಾಳಿ ನಡೆಸಿದರು.

For Latest News Updates, Join Our Whatsapp Community🚩
RELATED ARTICLES

Most Popular