HomeLatest Newsರಸ್ತೆ ಗುಂಡಿ ಮುಚ್ಚಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರಿಗೆ ಶಾಕ್...! ಎಫ್ಐಆರ್ ದಾಖಲು

ರಸ್ತೆ ಗುಂಡಿ ಮುಚ್ಚಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರಿಗೆ ಶಾಕ್…! ಎಫ್ಐಆರ್ ದಾಖಲು

ಬೆಂಗಳೂರು: ಪೂರ್ವಾನುಮತಿ ಪಡೆದುಕೊಳ್ಳದೆ ಏಕಾಏಕಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ರಸ್ತೆ ಗುಂಡಿ ಮುಚ್ಚಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರ ವಿರುದ್ಧ ಬೆಂಗಳೂರಿನ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗೋವಿಂದರಾಜನಗರ ಕ್ಷೇತ್ರದ ಬಿಜೆಪಿ ಮುಖಂಡ ಮತ್ತು ಬಿಬಿಎಂಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ, ಮಂಜುನಾಥ, ಗಂಗಮ್ಮ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸಹಾಯಕ ಸಬ್ ಇನ್ಸ್ಪೆಕ್ಟರ್ ನೀಡಿದ ದೂರಿನ ಮೇರೆಗೆ ಗೋವಿಂದರಾಜನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ರಸ್ತೆ ಗುಂಡಿ ಮುಚ್ಚದೆ ಸಾರ್ವಜನಿಕರಿಗೆ ಸರ್ಕಾರ ತೊಂದರೆ ನೀಡುತ್ತಿದೆ ಎಂದು ಆರೋಪಿಸಿ ವಿಜಯನಗರದ ಎಂಸಿ ಲೇಔಟ್ ಸರ್ವಜ್ಞ ಶಾಲೆ ಬಳಿ ಉಮೇಶ್ ಶೆಟ್ಟಿ ನೇತೃತ್ವದಲ್ಲಿ 20 ರಿಂದ 25 ಜನರು ಗುಂಪು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಗೆ ಅನುಮತಿ ಪಡೆಯದ ಕಾರಣ ಮತ್ತು ಸಾರ್ವಜನಿಕರ ಓಡಾಟ, ವಾಹನ ಸಂಚಾರಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಪ್ರಕರಣದ ದಾಖಲಿಸಲಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular