HomeKarnatakaಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸಾಗದ ನೌಕರರಿಗೆ ಶಾಕ್

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸಾಗದ ನೌಕರರಿಗೆ ಶಾಕ್

ಸರ್ಕಾರಿ ನೌಕರರು ಕಂಪ್ಯೂಟರ್ ಜ್ಞಾನ ಹೊಂದಿರಬೇಕೆಂಬುದು ಸರ್ಕಾರದ ಸೂಚನೆಯಾಗಿದೆ. ಆದರೆ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸಾಗದ ನೌಕರರಿಗೆ ಸಂಕಷ್ಟ ಎದುರಾಗಿದೆ.

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾಗದ ಸರ್ಕಾರಿ ನೌಕರರಿಗೆ ಮುಂಬಡ್ತಿ ಮತ್ತು ವಾರ್ಷಿಕ ಇನ್ ಕ್ರಿಮೆಂಟ್ ಇಲ್ಲವಾಗಿದೆ. ಹೀಗಾಗಿ ಕಡ್ಡಾಯವಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಆಗಬೇಕಿದೆ. ಅನೇಕ ನೌಕರರಿಗೆ ಕಂಪ್ಯೂಟರ್ ಜ್ಞಾನ ಇಲ್ಲ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯ ಜಾರಿಯಾದ ನಂತರ 3-4 ಬಾರಿ ಪ್ರಯತ್ನ ನಡೆಸಿದರೂ ಸಾವಿರಾರು ನೌಕರರು ಪಾಸ್ ಆಗಿಲ್ಲ.

ಹೆಚ್ಚಿನ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಆಗಿ ಮುಂಬಡ್ತಿ, ವಾರ್ಷಿಕ ಇನ್ ಕ್ರಿಮೆಂಟ್ ಪಡೆಯುತ್ತಿದ್ದಾರೆ. ಆದರೆ ಪಾಸಾಗದ ನೌಕರರಿಗೆ ನಿರಾಸೆಯಾಗದೆ. ಕಳೆದ ವರ್ಷ ಪರೀಕ್ಷೆ ನಡೆಯದ ಕಾರಣ ಮುಂಬಡ್ತಿ ಅಂಚಿನಲ್ಲಿರುವ ಮತ್ತು ಇದುವರೆಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾಗದ ಅನೇಕರು ಅವಧಿ ವಿಸ್ತರಿಸುವಂತೆ ಕೋರಿದ್ದಾರೆ. 55 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ ನೀಡಬೇಕೆಂದು ಮನವಿ ಕೂಡ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular