HomeLatest Newsಅಕ್ರಮ ಮದ್ಯ ಮಾರಾಟಗಾರರಿಗೆ ಶಾಕ್: ಮನೆಗಳಿಗೆ ನೀರು ಪೂರೈಕೆ ಬಂದ್

ಅಕ್ರಮ ಮದ್ಯ ಮಾರಾಟಗಾರರಿಗೆ ಶಾಕ್: ಮನೆಗಳಿಗೆ ನೀರು ಪೂರೈಕೆ ಬಂದ್

ಕೂಡ್ಲಿಗಿ(ವಿಜಯನಗರ): ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 13 ಮನೆಗಳಿಗೆ ತಹಶೀಲ್ದಾರ್ ತಾತ್ಕಾಲಿಕವಾಗಿ ನೀರು ಪೂರೈಕೆ ತಗಿತಗೊಳಿಸಿದ್ದಾರೆ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗೆದ್ದಲಗಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ತಹಶೀಲ್ದಾರ್ ಕ್ರಮಕ್ಕೆ ಜನರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಅಕ್ರಮ ಮದ್ಯ ಮಾರಾಟಗಾರರು ತಹಶೀಲ್ದಾರರ ಕ್ರಮಕ್ಕೆ ಬೆಚ್ಚಿಬಿದ್ದಿದ್ದಾರೆ.

ಕೂಡ್ಲಿಗಿ ತಾಲೂಕಿನ ಗೆದ್ದಲಗಟ್ಟೆ ಗ್ರಾಮದಲ್ಲಿ 10ಕ್ಕೂ ಹೆಚ್ಚು ಮಂದಿ ಆಕ್ರಮವಾಗಿ ಮದ್ಯ ಮಾರಾಟದಲ್ಲಿ ತೊಡಗಿದ್ದಾರೆ. ಇದರಿಂದಾಗಿ ಅಪ್ರಾಪ್ತರು ಕುಡಿತದ ಚಟಕ್ಕೆ ದಾಸರಾಗುತ್ತಿದ್ದಾರೆ ಎಂದು ಗ್ರಾಮದ 30ಕ್ಕೂ ಅಧಿಕ ಮಹಿಳೆಯರು ಕೂಡ್ಲಿಗಿ ತಹಶೀಲ್ದಾರ್, ಡಿವೈಎಸ್ಪಿ ಮತ್ತು ಅಬಕಾರಿ ನಿರೀಕ್ಷಕರಿಗೆ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 13 ಮನೆಗಳಿಗೆ ತಾತ್ಕಾಲಿಕವಾಗಿ ನೀರು ಸರಬರಾಜು ಬಂದ್ ಮಾಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular