HomeLatest Newsವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಗಳಿಗೆ ಶಾಕ್: 1 ಲಕ್ಷ ರೂ. ದೇಣಿಗೆ ಕಡ್ಡಾಯ

ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಗಳಿಗೆ ಶಾಕ್: 1 ಲಕ್ಷ ರೂ. ದೇಣಿಗೆ ಕಡ್ಡಾಯ

ಬೆಂಗಳೂರು: ರಾಜ್ಯ ವಿಧಾನ ಪರಿಷತ್ ಗೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ತಲಾ ಎರಡು ಸ್ಥಾನಗಳಿಗೆ 2026ರ ನವೆಂಬರ್ ನಲ್ಲಿ ನಡೆಯುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷ ತಯಾರಿ ಆರಂಭಿಸಿದೆ.

ಪಕ್ಷದ ಅಭ್ಯರ್ಥಿಗಳಾಗಲು ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳಾಗಲು ಆಸಕ್ತಿ ಹೊಂದಿದವರು ಒಂದು ಲಕ್ಷ ರೂಪಾಯಿ ದೇಣಿಗೆ ಮೊತ್ತದ ಡಿಡಿಯೊಂದಿಗೆ ಅರ್ಜಿ ಸಲ್ಲಿಸಲು ನವೆಂಬರ್ 1ರವರೆಗೆ ಕಾಲಾವಕಾಶ ನೀಡಲಾಗಿದೆ.

ಪಶ್ಚಿಮ ಪದವೀಧರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ ಸೇರಿ 4 ಕ್ಷೇತ್ರಗಳ ಸದಸ್ಯರ ಅವಧಿ 2026ರ ನವೆಂಬರ್ ಗೆ ಅಂತ್ಯವಾಗಲಿದ್ದು, ಈ ಕ್ಷೇತ್ರಗಳಿಗೆ ಹೊಸ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular