HomeLatest Newsಅಪರಿಚಿತ ನಂಬರ್ ನಿಂದ ವಾಟ್ಸಾಪ್ ಗೆ ಬಂದ ಫೈಲ್ ಡೌನ್ಲೋಡ್ ಮಾಡಿದ ವ್ಯಕ್ತಿಗೆ ಶಾಕ್: ಖಾತೆಯಲ್ಲಿದ್ದ...

ಅಪರಿಚಿತ ನಂಬರ್ ನಿಂದ ವಾಟ್ಸಾಪ್ ಗೆ ಬಂದ ಫೈಲ್ ಡೌನ್ಲೋಡ್ ಮಾಡಿದ ವ್ಯಕ್ತಿಗೆ ಶಾಕ್: ಖಾತೆಯಲ್ಲಿದ್ದ 10.70 ಲಕ್ಷ ರೂ. ಮಾಯ

ಉಡುಪಿ: ಅಪರಿಚಿತ ನಂಬರ್ ನಿಂದ ವಾಟ್ಸಾಪ್ ಗೆ ಬಂದ ಫೈಲ್ ಅನ್ನು ಡೌನ್ಲೋಡ್ ಮಾಡಿದ ವ್ಯಕ್ತಿಯೊಬ್ಬರು ತಮ್ಮ ಖಾತೆಯಿಂದ 10.70 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದಾರೆ.

ಉಡುಪಿಯ ಕರಂಬಳ್ಳಿಯ ಕಮಲನಾಭ ಬಾಯರಿ(57) ವಂಚನೆಗೆ ಒಳಗಾದವರು. ಅವರ ವಾಟ್ಸಾಪ್ ನಂಬರ್ ಗೆ ಡಿಸೆಂಬರ್ 4 ಮತ್ತು 5 ರಂದು ಅಪರಿಚಿತ ಸಂಖ್ಯೆಯಿಂದ ಎಪಿಕೆ ಫೈಲ್ ಬಂದಿದೆ. ಅದನ್ನು ಕಮಲನಾಭ ಅವರು ಡೌನ್ಲೋಡ್ ಮಾಡಿದ್ದಾರೆ. ಈ ವೇಳೆ ಅವರ ಖಾತೆಯಿಂದ ಹಂತ ಹಂತವಾಗಿ ಒಟ್ಟು 10.70 ಲಕ್ಷ ರೂ. ಕಡಿತವಾಗಿದೆ. ಘಟನೆಯ ಬಗ್ಗೆ ಅವರು ದೂರು ನೀಡಿದ್ದು, ಉಡುಪಿಯ ಸೆನ್ ಅಪರಾಧ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular