ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪದವಿ, ಕಾನೂನು ಹಾಗೂ ಚಿತ್ರಕಲಾ ಕಾಲೇಜುಗಳಲ್ಲಿ 2025- 26ರಲ್ಲಿ ಸಾಲಿನಲ್ಲಿ ಪ್ರವೇಶ ಕೋರ್ಸುಗಳ ಶುಲ್ಕವನ್ನು ಹೆಚ್ಚಳ ಮಾಡಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ.
ಇದರಿಂದ ಬಿಎ, ಬಿಎಸ್ಸಿ, ಬಿಕಾಂ, ಬಿಸಿಎ, ಬಿಬಿಎಂ, ಕಾನೂನು, ಚಿತ್ರಕಲೆ ಸೇರಿದಂತೆ ಎಲ್ಲಾ ರೀತಿಯ ಪದವಿಕೋರ್ಸ್ ಗಳ ಶುಲ್ಕ ಶೇಕಡ 5ರಷ್ಟು ಹೆಚ್ಚಳವಾಗಲಿದೆ.
ಇದರ ಹೊರತಾಗಿ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದ ಶುಲ್ಕವನ್ನು ಪ್ರತ್ಯೇಕವಾಗಿ ಪಡೆಯಲು ಅವಕಾಶ ನೀಡಲಾಗಿದೆ. ಅರ್ಜಿ ಶುಲ್ಕ, ಪ್ರವೇಶ ಶುಲ್ಕ, ಬೋಧನಾ ಶುಲ್ಕ ಹೀಗೆ 22 ರೀತಿಯ ಶುಲ್ಕವನ್ನು ವಿದ್ಯಾರ್ಥಿಗಳು ಪಾವತಿಸಬೇಕಿದೆ. ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಪ್ರತಿವರ್ಷ ಶೇಕಡ 5ರಷ್ಟು ಹೆಚ್ಚಳಕ್ಕೆ ನಿಯಮ ರೂಪಿಸಿದ್ದು, ಅಂತೆಯೇ ಈ ವರ್ಷವೂ ಶುಲ್ಕ ಹೆಚ್ಚಳ ಮಾಡಲಾಗಿದೆ.